alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರಿಗಳ ಜಟಾಪಟಿಗೆ ಕೈದಿಗಳು ಶಿಫ್ಟ್

ben-jail-d

ಬೆಂಗಳೂರು: ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಅಕ್ರಮಗಳ ಬಗ್ಗೆ ಅಧಿಕಾರಿಗಳ ನಡುವೆ ಜಟಾಪಟಿ ನಡೆದಿದ್ದು, ಇದರಿಂದಾಗಿ ಕೈದಿಗಳ ಮೇಲೆ ಪರಿಣಾಮ ಬೀರಿದೆ.

ಡಿ.ಐ.ಜಿ. ರೂಪಾ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾದ 18 ಕೈದಿಗಳನ್ನು ಬಳ್ಳಾರಿ ಸೇರಿದಂತೆ ವಿವಿಧ ಜೈಲ್ ಗಳಿಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.

ರೂಪಾ ಅವರಿಗೆ ಮಾಹಿತಿ ನೀಡಿದ್ದ ಆರೋಪದ ಮೇಲೆ ಕೈದಿಯೊಬ್ಬರ ಮೇಲೆ ಜೈಲು ಅಧೀಕ್ಷಕ ಕೃಷ್ಣ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಿನ್ನೆ ಜೈಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೂಪಾ ಮತ್ತು ಕೃಷ್ಣಕುಮಾರ್ ನಡುವೆ ವಾಗ್ವಾದ ನಡೆದಿದೆ. ಅಲ್ಲದೇ ಕೈದಿಗಳು ರೂಪಾ ಅವರ ಪರ ಮತ್ತು ವಿರುದ್ಧವಾಗಿ ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ತಿಳಿಗೊಳಿಸಲಾಗಿದೆ.

ರೂಪಾ ಅವರಿಗೆ ಮಾಹಿತಿ ನೀಡಿದ್ದರೆನ್ನಲಾದ 18 ಕೈದಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...