alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಹಾಡಹಗಲೇ ಮಚ್ಚಿನಿಂದ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.

ವಿಶ್ವನಾಥ್ ಗೌಡ ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಈತ ಕರ್ನಾಟಕ ನಾಡು ರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಎಂದು ತಿಳಿದು ಬಂದಿದೆ.

ಗಾಂಧಿ ಪಾರ್ಕ್ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು, ಮಚ್ಚಿನಿಂದ ಹಲ್ಲೆ ನಡೆಸಿದ್ದು, ವಿಶ್ವನಾಥ್ ಗೌಡರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೋಟೆ ಠಾಣೆ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...