alex Certify
ಕನ್ನಡ ದುನಿಯಾ       Mobile App
       

Kannada Duniya

ನಾನೂ ಟಿಕೇಟ್ ಆಕಾಂಕ್ಷಿ ಎಂದು ಪುನರುಚ್ಚರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ನಾನೂ ಕೂಡ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡ ಪುನರುಚ್ಚರಿಸಿದ್ದಾರೆ.

ಅವರು ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆ.ಎಸ್. ಈಶ್ವರಪ್ಪರ ಬಗ್ಗೆ ಪಕ್ಷದ ಬಿಳಕಿ ಕೃಷ್ಣಮೂರ್ತಿ ಅವರು ಆಡಿದ ಮಾತಿನಿಂದ ನೋವಾಗಿದೆ. ಬೇಸರವಾಗಿದೆ. ಇದು ನಡೆಯಬಾರದಿತ್ತು. ನನಗೆ ಟಿಕೆಟ್ ನೀಡಬೇಕೆಂದು ಕೈಗಾರಿಕೋದ್ಯಮಿಗಳ ನಿಯೋಗವು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು ಪೂರ್ವ ನಿಯೋಜಿತವಲ್ಲ ಎಂದಿದ್ದಾರೆ.

ಈಶ್ವರಪ್ಪ ಅವರ ಬಗ್ಗೆ ಹುಗುರವಾಗಿ ಮಾತನಾಡಿದ ಬಿಳಕಿ ಕೃಷ್ಣಮೂರ್ತಿ ಅವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಪಕ್ಷದ ನಗರ ಘಟಕ ಒತ್ತಾಯಿಸಿದೆ. ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆದಿದೆ. ಹಿರಿಯರಾದ ಈಶ್ವರಪ್ಪ ಅವರ ಸಮ್ಮುಖದಲ್ಲೇ ಇತ್ಯರ್ಥಪಡಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...