alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ನಾಡಹಬ್ಬ ದಸರಾಕ್ಕೆ ಚಾಲನೆ

ಶಿವಮೊಗ್ಗ ನಗರದ ಕೋಟೆ ಶ್ರೀ ಚಂಡಿಕಾ ದುರ್ಗ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಆಯೋಜಿಸಲಾಗಿರುವ ನಾಡಹಬ್ಬ ದಸರಾಕ್ಕೆ ಇಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮಗೌಡ ಚಾಲನೆ ನೀಡಿದರು.

ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ನೆರವೇರಿಸುವುದರೊಂದಿಗೆ ನಾಡಹಬ್ಬ ದಸರಾ ಉತ್ಸವ ಆರಂಭಗೊಂಡಿತು. ದಸರಾ ಉದ್ಘಾಟಿಸಿ ಮಾತನಾಡಿದ ಸುಕ್ರಿ ಬೊಮ್ಮಗೌಡ, ಮೈಸೂರಿನಂತೆ ಶಿವಮೊಗ್ಗದಲ್ಲೂ ನಾಡಹಬ್ಬ ದಸರಾವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಸಂತೋಷವನ್ನುಂಟು ಮಾಡಿದೆ. ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ಪ್ರತಿ ವರ್ಷ ನಾಡಹಬ್ಬ ದಸರಾ ಇದೇ ರೀತಿ ಅದ್ದೂರಿಯಾಗಿ ನಡೆಯಲಿ ಎಂದು ಆಶಿಸಿದರು.

ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ತಾಯಿ ಚಾಮುಂಡೇಶ್ವರಿ ನಾಡಿಗೆ ಸುಖ, ಸಮೃದ್ದಿ ಕರುಣಿಸಲಿ, ಉತ್ತಮ ಮಳೆ ಬಂದು ಕೆರೆ-ಕಟ್ಟೆ, ಜಲಾಶಯಗಳು ಭರ್ತಿಯಾಗುವುದರ ಮೂಲಕ ನಾಡಿನ ಜನತೆಗೆ ಹಾಗೂ ರೈತರಿಗೆ ಸುಖ ಕರುಣಿಸಲಿ ಎಂದರು.

ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಶಿವಮೊಗ್ಗ ಸಾಂಸ್ಕೃತಿಕ ತವರೂರು. ಧಾರ್ಮಿಕತೆ ಹಾಗೂ ಸಂಸ್ಕೃತಿಗೆ ಹೆಸರಾಗಿದೆ. ಇಲ್ಲಿ ದಸರಾ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಶಿವಮೊಗ್ಗ ದಸರಾ ರಾಜ್ಯದಲ್ಲಿ ಪ್ರಸಿದ್ದಿ ಪಡೆಯುತ್ತಿದೆ. 9 ದಿನಗಳ ನವರಾತ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸಲು ನಗರಪಾಲಿಕೆ ಮುಂದಾಗಿದೆ. ಸರ್ಕಾರ ಕೂಡ ದಸರಾ ಹಬ್ಬಕ್ಕೆಂದು 1 ಕೋಟಿ ರೂ. ಅನುದಾನ ನೀಡಿದೆ ಎಂದು ತಿಳಿಸಿದರು.

ಪಾಲಿಕೆ ಮೇಯರ್ ಏಳುಮಲೈ ಬಾಬು ಮಾತನಾಡಿ, ಜನತೆಯ ಸಹಕಾರದಿಂದ ಪ್ರತಿ ವರ್ಷ ನಾಡಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಅದೇ ರೀತಿ ಈ ವರ್ಷವೂ ಪಾಲಿಕೆ ವತಿಯಿಂದ ದಸರಾ ಹಬ್ಬದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜನತೆ ಸಹಕರಿಸಬೇಕೆಂದು ಕೋರಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...