alex Certify
ಕನ್ನಡ ದುನಿಯಾ       Mobile App
       

Kannada Duniya

ವ್ಯಾಪಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರ

ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳೆಲ್ಲವೂ ತುಂಬಿ ಹರಿಯತೊಡಗಿದೆ. ಶಿವಮೊಗ್ಗದ ಕೆಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಲೆನಾಡು ಹಾಗೂ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರ ಪರಿಣಾಮ ತುಂಗಾ-ಭದ್ರಾ, ಶರಾವತಿ, ಮಾಲತಿ, ವರದಾ ಸೇರಿದಂತೆ ಎಲ್ಲಾ ನದಿಗಳೂ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಮಂಗಳವಾರ (ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ) ಜಿಲ್ಲೆಯಲ್ಲಿ 97.97 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗ – 31.4 ಮಿ.ಮೀ., ಭದ್ರಾವತಿ 42.00 ಮಿ.ಮೀ., ತೀರ್ಥಹಳ್ಳಿ 151.80 ಮಿ.ಮೀ., ಸಾಗರ 106.60 ಮಿ.ಮೀ., ಶಿಕಾರಿಪುರ 45.40 ಮಿ.ಮೀ., ಸೊರಬ -67.00 ಮಿ.ಮೀ. ಹಾಗೂ ಹೊಸನಗರ 241.60 ಮಿ.ಮೀ. ಮಳೆಯಾಗಿದೆ.

ಆಗಸ್ಟ್ ತಿಂಗಳ ವಾಡಿಕೆ ಮಳೆ 417.87 ಮಿ.ಮೀ. ಇದ್ದು 290.43 ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ಪ್ರಮುಖ ಜಲಾಶಯಗಳಾದ ಭದ್ರಾ ಹಾಗೂ ತುಂಗಾ ಈಗಾಗಲೇ ಭರ್ತಿಯಾಗಿದ್ದು, ರಾಜ್ಯದ ಪ್ರಮುಖ ಜಲ ವಿದ್ಯುತ್ ಕೇಂದ್ರವಾಗಿರುವ ಲಿಂಗನಮಕ್ಕಿ ಅಣೆಕಟ್ಟೆ ಜಲಾಶಯ ಭರ್ತಿಯಾಗುವ ಕ್ಷಣಗಣನೆ ಆರಂಭವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸರಿ ಸುಮಾರು 3 ಅಡಿಯಷ್ಟು ನೀರು ಅಣೆಕಟ್ಟೆಗೆ ಹರಿದುಬಂದಿದೆ.

ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, 94,861 ಕ್ಯೂಸೆಕ್ ಒಳ ಹರಿವು ಇದೆ. ಹಾಲಿ 1815.35 ಅಡಿ ನೀರು ಸಂಗ್ರಹವಾಗಿದ್ದು, ಗರಿಷ್ಟ 1819 ಅಡಿ ಎತ್ತರದ ಜಲಾಶಯ ಭರ್ತಿಗೆ 3 ಅಡಿ ಬಾಕಿ ಇದೆ. ಇಂದು ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡುವ ಸಾಧ್ಯತೆ ಕಂಡುಬಂದಿದೆ.
ತುಂಗಾ ನದಿ ಉಕ್ಕಿ ಹರಿಯತೊಡಗಿದ್ದು, ಒಳ ಹರಿವು 85855 ಕ್ಯೂಸೆಕ್ ಇದ್ದರೆ, ಗಾಜನೂರು ಅಣೆಕಟ್ಟೆಯಿಂದ 83855 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಭದ್ರಾ ಜಲಾಶಯಕ್ಕೆ 56395 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 52002 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ತುಂಗಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಶಿವಮೊಗ್ಗ ನಗರದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಸೀಗೆಹಟ್ಟಿ, ಕುಂಬಾರಗುಂಡಿ, ಮಂಡಕ್ಕಿಭಟ್ಟಿ, ಜೆಪಿಎನ್ ಸ್ಕೂಲ್, ಕನಕದಾಸ ಉದ್ಯಾನವನ ಸುತ್ತಮುತ್ತಲ ಪ್ರದೇಶ ನೀರಿನಿಂದ ಆವೃತ್ತಗೊಂಡಿದೆ. ಅಲ್ಲಿನ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಪರ್ಯಾಯ ವ್ಯವಸ್ಥೆ ಗೆ ಜಿಲ್ಲಾಡಳಿತ ಮುಂದಾಗಿದೆ.

ಕ್ಷಣ ಕ್ಷಣಕ್ಕೂ ನದಿಯ ನೀರಿನ ಮಟ್ಟ ಒಂದೇ ಸಮನೆ ಏರಿಕೆಯಾಗುತ್ತಿದ್ದು, ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯ, ಪೀಠೋಪಕರಣ ಇನ್ನಿತರ ವಸ್ತುಗಳು ನೀರಿನಲ್ಲಿ ಮುಳುಗಿ ಹೋಗಿವೆ. ಸ್ಥಳೀಯ ಶಾಸಕ ಕೆ.ಎಸ್. ಈಶ್ವರಪ್ಪ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ನಿವಾಸಿಗಳಿಗೆ ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು. ಗಂಜಿ ಕೇಂದ್ರ ತೆರೆಯುವಂತೆ ಸೂಚಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...