alex Certify
ಕನ್ನಡ ದುನಿಯಾ       Mobile App
       

Kannada Duniya

ಆಗುಂಬೆ ಘಾಟ್ ಮೂಲಕ ಪ್ರಯಾಣಿಸುವವರಿಗೊಂದು ಸೂಚನೆ

ರಾಜ್ಯಕ್ಕೆ ಮುಂಗಾರು ಕಾಲಿಟ್ಟ ಸಂದರ್ಭದಲ್ಲಿ ಅಬ್ಬರಿಸಿದ್ದ ವರುಣ ಕೆಲ ಸಮಯ ತಣ್ಣಗಾಗಿದ್ದು, ಇದೀಗ ಮತ್ತೆ ವರುಣನ ಆರ್ಭಟ ಜೋರಾಗಿದೆ.

ರಾಜ್ಯದ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವುದರ ಜೊತೆಗೆ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ರಸ್ತೆ ಕುಸಿತ ಸಂಭವಿಸಿದೆ.

ಉಡುಪಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯಲ್ಲಿ ರಸ್ತೆ ಕುಸಿತ ಸಂಭವಿಸಿರುವ ಕಾರಣ ಸಂಚಾರ ಅಸ್ತವ್ಯಸ್ತಗೊಂಡಿದ್ದು, ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರದ ಮೇಲೆ ನಿಷೇಧ ಹೇರಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...