alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜ್ ಕ್ಯಾಂಪಸ್ ನಲ್ಲೇ ವಿದ್ಯಾರ್ಥಿಗೆ ಚೂರಿ ಇರಿತ

ಶಿವಮೊಗ್ಗ: ವಿದ್ಯಾರ್ಥಿನಿಯನ್ನು ಚುಡಾಯಿಸಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದಿದೆ. ಅಂತಿಮ ಬಿಎಸ್ಸಿ ವಿದ್ಯಾರ್ಥಿ ಅವಿನಾಶ್ ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಗೋಕುಲ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದವರು. ಕೆಲ ದಿನಗಳ ಹಿಂದೆ ಗೋಕುಲ್, ಕಾಲೇಜಿನ ವಿದ್ಯಾರ್ಥಿನಿಯೋರ್ವಳನ್ನು  ಚುಡಾಯಿಸಿದ್ದ ಎನ್ನಲಾಗಿದೆ. ಆಗ ವಿದ್ಯಾರ್ಥಿಗಳೆಲ್ಲ ಸೇರಿ ಉಪನ್ಯಾಸಕರಿಗೆ ದೂರು ನೀಡಿದ್ದರಲ್ಲದೇ ಬುದ್ದಿವಾದ ಹೇಳಿದ್ದರು.

ಇದೇ ಕಾರಣದಿಂದ ಇಂದು ಗೆಳೆಯರ ಜೊತೆ ಆಗಮಿಸಿದ ಗೋಕುಲ್ ಕ್ಯಾಂಪಸ್ ನಲ್ಲಿದ್ದ ಅವಿನಾಶ್ ಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡಿರುವ ಅವಿನಾಶ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಸಂಬಂಧ ಕೋಟೆ ಠಾಣೆ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...