alex Certify
ಕನ್ನಡ ದುನಿಯಾ       Mobile App
       

Kannada Duniya

ಶುಭ ಸುದ್ದಿ: ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿ ಸಂಚಾರ ಬಂದ್ ಆಗಿದ್ದ ಶಿರಾಡಿ ಘಾಟ್ ನಲ್ಲಿ, ದುರಸ್ತಿ ಬಳಿಕ ಲಘು ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿತ್ತು.

ಇದುವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿದ್ದು, ಇದೀಗ ರಾಷ್ಟ್ರೀಯ ಹೆದ್ದಾರಿ ವಿಭಾಗ ಕಾರ್ಯ ನಿರ್ವಾಹಕ ಎಂಜಿನಿಯರ್, ಎಲ್ಲ ರೀತಿಯ ವಾಹನಗಳು ಸಂಚರಿಸಬಹುದು ಎಂದು ವರದಿ ನೀಡಿರುವ ಹಿನ್ನೆಲೆಯಲ್ಲಿ ಇಂದಿನಿಂದ ಭಾರಿ ವಾಹನ ಸೇರಿದಂತೆ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಇಂದು ಬೆಳಗ್ಗೆ 6 ಗಂಟೆಯಿಂದಲೇ ಇದು ಜಾರಿಗೆ ಬಂದಿದ್ದು, ಶಿರಾಡಿ ಘಾಟ್ ಬಂದ್ ಆಗಿದ್ದ ಕಾರಣ ಇದುವರೆಗೂ ಸುತ್ತಿಕೊಂಡು ಬರುತ್ತಿದ್ದ ಭಾರೀ ವಾಹನಗಳ ಚಾಲಕರು ಈಗ ಸಂಚಾರಕ್ಕೆ ಅನುಮತಿ ಸಿಕ್ಕಿರುವುದರಿಂದ ಸಂತಸಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...