alex Certify
ಕನ್ನಡ ದುನಿಯಾ       Mobile App
       

Kannada Duniya

ಶೀರೂರು ಶ್ರೀಗಳ ಸಾವಿನ ಪ್ರಕರಣಕ್ಕೆ ದಿನಕ್ಕೊಂದು ತಿರುವು

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾದ ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ನಿಗೂಢ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಇದರ ಮಧ್ಯೆ ಬಹಿರಂಗವಾಗುತ್ತಿರುವ ಒಂದೊಂದು ಮಾಹಿತಿಗಳು ಪ್ರಕರಣಕ್ಕೆ ಹೊಸ ಹೊಸ ತಿರುವು ನೀಡುತ್ತಿವೆ.

ಶ್ರೀಗಳು ನಿಧನರಾದ ದಿನದಂದು ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಅವರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಪೊಲೀಸರು ತನಿಖೆ ಆರಂಭಿಸಿರುವ ಮಧ್ಯೆ ಶೀರೂರು ಶ್ರೀಗಳ ಸಾವಿಗೆ ಅವರ ಮದ್ಯಪಾನ ವ್ಯಸನವೇ ಕಾರಣವೆಂದು ಹೇಳಲಾಗಿದ್ದ ಆಡಿಯೋ ಬಹಿರಂಗಗೊಂಡಿತ್ತು. ಇದಾದ ನಂತರ ಶ್ರೀಗಳು ಮುಂಬೈ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ಹಣ ನೀಡಿದ್ದು, ಹಣ ವಾಪಸ್ ಬಾರದ ಕಾರಣ ವಂಚನೆಗೀಡಾಗಿದ್ದರೆಂಬ ಮಾತುಗಳು ಕೇಳಿ ಬಂದಿದ್ದವು.

ಈ ನಡುವೆ ಪೊಲೀಸರು ಶೀರೂರು ಸ್ವಾಮೀಜಿ ಅವರೊಂದಿಗೆ ಆತ್ಮೀಯತೆ ಹೊಂದಿದ್ದ ಬ್ರಹ್ಮಾವರದ ಮಹಿಳೆಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರೆನ್ನಲಾಗಿದ್ದು, ಮಠದ ಮಾಜಿ ಮ್ಯಾನೇಜರ್, ಸ್ವಾಮೀಜಿಗಳ ಸಾವಿಗೆ ಈ ಮಹಿಳೆಯೇ ಕಾರಣ ಎಂದು ಆರೋಪಿಸಿದ್ದರು.

ಹೀಗೆ ಶೀರೂರು ಮಠದ ಶ್ರೀಲಕ್ಷ್ಮೀವರತೀರ್ಥ ಸ್ವಾಮೀಜಿಗಳ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿಗಳು ಹೊರ ಬೀಳುತ್ತಿದ್ದು, ಪೊಲೀಸರ ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬೀಳಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...