alex Certify
ಕನ್ನಡ ದುನಿಯಾ       Mobile App
       

Kannada Duniya

ಶೀರೂರು ಮಠದಲ್ಲಿದ್ದ ಡಿವಿಆರ್ ನಾಪತ್ತೆ

ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅಸಹಜ ಸಾವಿನ ಪ್ರಕರಣ, ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಮಠದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಡಿವಿಆರ್ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಶ್ರೀಗಳು ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ದಿನದಂದೇ ಮಠಕ್ಕೆ ಭೇಟಿ ನೀಡಿದ ವ್ಯಕ್ತಿಯೊಬ್ಬ ಡಿವಿಆರ್ ಸೇರಿದಂತೆ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಇದೀಗ ಆತನ ಪತ್ತೆಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಶೀರೂರು ಮೂಲ ಮಠದ ಪ್ರವೇಶ ದ್ವಾರದಲ್ಲೇ ಸಿಸಿ ಟಿವಿಯನ್ನು ಅಳವಡಿಸಲಾಗಿದ್ದು, ಇದರಲ್ಲಿ ಮಠಕ್ಕೆ ಭೇಟಿ ನೀಡುವವರ ದೃಶ್ಯಾವಳಿ ದಾಖಲಾಗುತ್ತಿತ್ತು. ಆದರೆ ಇದೀಗ ಡಿವಿಆರ್ ನಾಪತ್ತೆಯಾಗಿರುವ ಕಾರಣ ಈ ವಿವರ ಲಭ್ಯವಾಗಲು ಕಷ್ಟಕರವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...