alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಆದಾಯ ತೆರಿಗೆ ಇಲಾಖೆ, ದೆಹಲಿಯ ನಾಲ್ಕು ಫ್ಲಾಟ್ ಗಳಲ್ಲಿ ನಡೆಸಿದ ದಾಳಿ ವೇಳೆ ಪತ್ತೆಯಾದ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಡಿ.ಕೆ. ಸಹೋದರರ ವಿರುದ್ಧ ಪ್ರಕರಣ ದಾಖಲಿಸಿದ್ದು, ಎಫ್ಐಆರ್ ದಾಖಲಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಇಡಿ ಅಧಿಕಾರಿಗಳು ಕಾನೂನು ಕ್ರಮ ಜರುಗಿಸುವ ಸಂಬಂಧ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ನಡೆದ ಐಟಿ ದಾಳಿಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಣದ ಮೂಲಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸಮರ್ಪಕ ಮಾಹಿತಿಯನ್ನು ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಡಿಕೆಶಿ ವಿರುದ್ಧ ಇಡಿ ಅಧಿಕಾರಿಗಳು ಎಫ್‍ಐಆರ್ ದಾಖಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ಒಂದು ವೇಳೆ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಾದರೆ ಜಾರಿ ನಿರ್ದೇಶನಾಲಯ ಅವರ ಬಂಧನಕ್ಕೆ ಮುಂದಾಗಬಹುದು. ಅಲ್ಲದೇ ಅನಿವಾರ್ಯವಾಗಿ ಡಿಕೆಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿ ಬರಬಹುದು.

ಐಟಿ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಇಡಿಗೆ ದೂರು ನೀಡಿತ್ತು. ಅಲ್ಲದೇ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿ, ಈ ಹಣದ ಮೂಲಕ ಕೋಟ್ಯಂತರ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಡಿ.ಕೆ. ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಇಡಿ ಕ್ರಮಕ್ಕೆ ಮುಂದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...