alex Certify
ಕನ್ನಡ ದುನಿಯಾ       Mobile App
       

Kannada Duniya

ಗಣಪತಿ ಮೆರವಣಿಗೆಯಲ್ಲಿ ಗಲಾಟೆ, ಶಿವಮೊಗ್ಗದಲ್ಲಿ ಬಿಗಿ ಭದ್ರತೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, 2 ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ.

ಶ್ರೀರಾಮನಗರ ಬಡಾವಣೆಯ ಬಜರಂಗದಳ ಕಾರ್ಯಕರ್ತ ಉದಯ್ ಮೇಲೆ ಹಲ್ಲೆ ನಡೆಸಲಾಗಿದೆ. ಮತ್ತೊಂದು ಘಟನೆಯಲ್ಲಿ ಓ.ಟಿ. ರಸ್ತೆಯ ಸಿದ್ದಪ್ಪ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಗಣಪತಿ ಮೆರವಣಿಗೆ ವೇಳೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸೆಪ್ಟಂಬರ್ 5 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದ್ದು, ಮೆರವಣಿಗೆ ಸಾಗುವ ರಸ್ತೆಗಳನ್ನು ಕೇಸರಿ ಧ್ವಜ, ಬಂಟಿಂಗ್ಸ್ ಗಳಿಂದ ಸಿಂಗರಿಸಲಾಗಿದೆ.

ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಗಿದೆ. ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದ್ದು, ಬಂದೋಬಸ್ತ್ ನಲ್ಲಿ ಮೆರವಣಿಗೆ ನಡೆಯಲಿದೆ. ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...