alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಶಿವಮೊಗ್ಗ: ಸಾವಿನ ಹೆದ್ದಾರಿ ಎಂದೆ ಕರೆಯಲ್ಪಡುವ ಶಿವಮೊಗ್ಗ –ಸಾಗರ ರಸ್ತೆ ಮತ್ತಿಬ್ಬರನ್ನು ಬಲಿ ಪಡೆದಿದೆ. ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ವೀರಣ್ಣನ ಬೆನವಳ್ಳಿ ಸಮೀಪದಲ್ಲಿ ನಡೆದಿದೆ.

ಅಮಿತ್, ಜಾನ್ಸನ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಇಬ್ಬರೂ ಬೈಕ್ ನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದು ಜಾನ್ಸನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅಮಿತ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬಸ್ ಚಾಲಕನ ಅತಿವೇಗ, ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸಿ ಅನೇಕರು ಪ್ರಾಣ ಕಳೆದುಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...