alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ಡಿಕ್ಕಿಯಾಗಿ ಬಸ್ ಭಸ್ಮ: ಇಬ್ಬರ ಸಾವು

smg-acc

ಶಿವಮೊಗ್ಗ: ನಗರದ ಹೊರ ವಲಯದ ವೀರಣ್ಣನ ಬೆನವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಬೈಕ್ ಸವಾರರಾದ ಲೋಕೇಶ್, ಜಗದೀಶ್ ಮೃತಪಟ್ಟವರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್ ನ ಟೈಯರ್ ಬ್ಲಾಸ್ಟ್ ಆಗಿ ಖಾಸಗಿ ಬಸ್ ನ ಡೀಸೆಲ್ ಟ್ಯಾಂಕ್ ಗೆ ಡಿಕ್ಕಿ ಹೊಡೆದು ಬೆಂಕಿ ತಗುಲಿದೆ. ಬೈಕ್ ಸವಾರರಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಂಕಿ ಬಸ್ ಗೆ ತಗುಲಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ. ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿ ಸಂಪೂರ್ಣ ಸುಟ್ಟು ಹೋಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...