alex Certify
ಕನ್ನಡ ದುನಿಯಾ       Mobile App
       

Kannada Duniya

ಮಲೆನಾಡಿನಲ್ಲಿ ಮಿಂಚು ಹರಿಸಲಿದ್ದಾರೆ ಅಮಿತ್ ಶಾ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಷ್ಟ್ರೀಯ ಪಕ್ಷಗಳ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸಿದ್ದಾರೆ. ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ.

ರಾಹುಲ್ ಪ್ರವಾಸ ಮುಗಿದ ಬೆನ್ನಲ್ಲೇ ಇಂದಿನಿಂದ ಅಮಿತ್ ಶಾ ರಾಜ್ಯದಲ್ಲಿ 2 ದಿನ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 9.30 ಕ್ಕೆ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿನಿಂದ ತುಮಕೂರಿಗೆ ಆಗಮಿಸಲಿದ್ದಾರೆ.

ತುಮಕೂರು ವಿವಿ ಹೆಲಿಪ್ಯಾಡ್ ಗೆ ಆಗಮಿಸಿ ಅಲ್ಲಿಂದ ಕಾರಿನಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಗಳ ಆಶೀರ್ವಾದ ಪಡೆದು ಪ್ರವಾಸ ಆರಂಭಿಸಲಿದ್ದಾರೆ. ತಿಪಟೂರಿನಲ್ಲಿ ತೆಂಗು ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಲಿದ್ದಾರೆ.

ಅಲ್ಲಿಂದ ರಾಷ್ಟ್ರಕವಿ ಕುವೆಂಪು ಮೆಚ್ಚಿನ ತಾಣ ಕವಿಶೈಲಕ್ಕೆ ಭೇಟಿ ನೀಡಲಿದ್ದು, ನಂತರ ತೀರ್ಥಹಳ್ಳಿಯಲ್ಲಿ ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ಶಿವಮೊಗ್ಗದಲ್ಲಿ ರೋಡ್ ಶೋ, ಉದ್ಯಮಿಗಳು –ವ್ಯಾಪಾರಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಜೆ 7.30 ಕ್ಕೆ ಬೆಕ್ಕಿನ ಕಲ್ಮಠ ಸ್ವಾಮೀಜಿ ಭೇಟಿ ಮಾಡಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದು, ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...