alex Certify
ಕನ್ನಡ ದುನಿಯಾ       Mobile App
       

Kannada Duniya

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಅಮಿತ್ ಶಾ

ಶಿವಮೊಗ್ಗ: ರಾಜ್ಯದಲ್ಲಿ 2 ದಿನ ಪ್ರವಾಸ ಕೈಗೊಂಡಿರುವ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ, ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಅವರು, ಅಡಿಕೆ ಆರೋಗ್ಯಕ್ಕೆ ಪೂರಕವಾಗಿದೆ. ನಾನು ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದೇನೆ. ಊಟವಾದ ಬಳಿಕ ಆರೋಗ್ಯಕ್ಕೆ ಪೂರಕವಾಗಿದ್ದರಿಂದ ಅಡಿಕೆ ತಿಂದಿದ್ದೇನೆ ಎಂದು ಹೇಳಿದ್ದಾರೆ.

ದೇಶದಲ್ಲಿ ಅಡಿಕೆ ಬೆಳೆಯುವ ಅಡಿಕೆಯಲ್ಲಿ ಶೇ. 50 ರಷ್ಟು ಪ್ರಮಾಣದ ಅಡಿಕೆ ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. ನಮ್ಮ ಸರ್ಕಾರ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರ ಗುಟ್ಕಾ, ಅಡಿಕೆಯನ್ನು ಆರೋಗ್ಯಕ್ಕೆ ಹಾನಿಕಾರಕ ಪಟ್ಟಿಯಲ್ಲಿ ಸೇರಿಸಿ ಅಫಿಡವಿಟ್ ಸಲ್ಲಿಸಿತ್ತು. ಇದರಿಂದ ಬೆಳೆಗಾರರಿಗೆ ಸಮಸ್ಯೆಯಾಗಿತ್ತು ಎಂದು ದೂರಿದ್ದಾರೆ. ರಾಜ್ಯದಲ್ಲಿ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 500 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗದಲ್ಲಿ ಅಡಿಕೆ ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಟ್ಟುಹೋದ ಟ್ರಾನ್ಸ್ ಫಾರ್ಮರ್ ಆಗಿದ್ದು, ಹೊಸ ಟ್ರಾನ್ಸ್ ಫಾರ್ಮರ್ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿಸಲು ಬಿ.ಜೆ.ಪಿ. ಬೆಂಬಲಿಸಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...