alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಗಾಂಧಿ ಮಕ್ಕಳಾಟ ನಿಲ್ಲಿಸಲಿ: ಬಿ.ಎಸ್.ವೈ.

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಶಿವಮೊಗ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾದವರನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.ಐ.ಸಿ.ಸಿ. ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಎಲ್ಲಿಗಾದರೂ ಹೋಗಲಿ, ಏನನ್ನಾದರೂ ಸೇವಿಸಲಿ, ನಾನು ಕೇಳಲಾರೆ. ಅವರು ಮಕ್ಕಳಾಟ ನಿಲ್ಲಿಸಲಿ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪಕ್ಕದಲ್ಲಿ ಅವರು ಕುಳಿತುಕೊಂಡು ನನ್ನ ಬಗ್ಗೆ ಟೀಕಿಸಿದರೆ, ರಾಜ್ಯದ ಜನ ಒಪ್ಪಲಾರರು. ಭ್ರಷ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಹಗರಣಗಳ ಆರೋಪ ಹೊತ್ತುಕೊಂಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಕೂರಿಸಿಕೊಂಡು ನನ್ನನ್ನು ಟೀಕಿಸಿದ ರಾಹುಲ್ ಗಾಂಧಿಯವರಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಪ್ರಚಾರ ನಡೆಸಿದ ಕಡೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್ ಕೆಲವೇ ತಿಂಗಳಲ್ಲಿ ತೊಲಗುತ್ತದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...