alex Certify
ಕನ್ನಡ ದುನಿಯಾ       Mobile App
       

Kannada Duniya

‘ಭರ್ಜರಿ’ ನೋಡಲು ಬಂದ ಯೋಧನಿಂದ ನೀಚಕೃತ್ಯ

ಶಿವಮೊಗ್ಗ: ‘ಭರ್ಜರಿ’ ಸಿನಿಮಾ ನೋಡಲು ಬಂದಿದ್ದ ಸಿ.ಆರ್.ಪಿ.ಎಫ್. ಯೋಧನೊಬ್ಬ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ವಿದ್ಯಾನಗರದ ಕಿರಣ್ ಕುಮಾರ್ ಎಂಬಾತನೇ ಇಂತಹ ಕೃತ್ಯವೆಸಗಿದವ. ಕಿರಣ್ ಕುಮಾರ್ ಮದ್ಯಪಾನ ಮಾಡಿ ರಾತ್ರಿ ‘ಭರ್ಜರಿ’ ಸಿನಿಮಾ ನೋಡಲು ಬಂದಿದ್ದಾನೆ.

ಅಕ್ಕಪಕ್ಕದಲ್ಲಿ ಕುಳಿತಿದ್ದ ಯುವತಿಯರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಇದರಿಂದ ಆಕ್ರೋಶಗೊಂಡ ಮಹಿಳೆಯರು ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ತಿಳಿಸಿದ್ದಾರೆ.

ಆತನನ್ನು ಹೊರಗೆ ಕರೆತಂದ ಜನ ಕೆನ್ನೆಗೆ ಬಾರಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಯನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...