alex Certify
ಕನ್ನಡ ದುನಿಯಾ       Mobile App
       

Kannada Duniya

ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರ ಸಾವು

ಶಿವಮೊಗ್ಗ: ಬೈಕ್ ಹಾಗೂ ಆಂಬುಲೆನ್ಸ್ ಡಿಕ್ಕಿಯಾಗಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪದ ಸಂಪಿಗೆನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ದಾವಣಗೆರೆ ಜಿಲ್ಲೆ ಮಾಯಕೊಂಡದ ಹನುಮಂತಪ್ಪ(58), ಮುರುಗಪ್ಪ(55) ಎಂದು ಗುರುತಿಸಲಾಗಿದೆ. ಹಣಗೆರೆಕಟ್ಟೆಗೆ ಹೋಗಿ ಬೈಕ್ ನಲ್ಲಿ ಬರುವಾಗ ಆಂಬುಲೆನ್ಸ್ ಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...