alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಬಿ.ಜೆ.ಪಿ. ಜನಸಂಪರ್ಕ ಅಭಿಯಾನ

img-20170618-wa0016

ಶಿವಮೊಗ್ಗ: ರಾಜ್ಯ ಬಿ.ಜೆ.ಪಿ. ವತಿಯಿಂದ ಜನಸಂಪರ್ಕ ಅಭಿಯಾನ ಕೈಗೊಂಡಿದ್ದು, ಶಿವಮೊಗ್ಗದಲ್ಲಿ ಬಿ.ಜೆ.ಪಿ. ನಾಯಕರ ದಂಡೇ ನೆರೆದಿದೆ.

ಶಿವಮೊಗ್ಗದ ಎನ್.ಇ.ಎಸ್. ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಬೆಳಿಗ್ಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಿರಿಗೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮದ ದಲಿತ ಶ್ರೀನಿವಾಸ್ ಅವರ ಮನೆಯಲ್ಲಿ ಉಪಹಾರ ಸೇವಿಸಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಕುಮಾರ್ ಬಂಗಾರಪ್ಪ, ಬಿ.ವೈ. ರಾಘವೇಂದ್ರ, ಬೇಳೂರು ಗೋಪಾಲ ಕೃಷ್ಣ ಮೊದಲಾದವರು ಈ ಸಂದರ್ಭದಲ್ಲಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

ನಾವು ದಲಿತರ ಮನೆಯಲ್ಲಿ ಉಪಹಾರ ಸೇವನೆ ಮಾಡಿದ್ದಕ್ಕೆ ಟೀಕಿಸುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ. ಬಾಬು ಜಗಜೀವನರಾಂ ಅವರನ್ನು ಪ್ರಧಾನಿಯಾಗಿ ಮಾಡಲು ಮುಂದಾದಾಗ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ, ದಲಿತರಿಗೆ ಅನ್ಯಾಯ ಎಸಗಿದೆ ಎಂದು ದೂರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...