alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್. ಈಶ್ವರಪ್ಪರನ್ನು ಟೀಕಿಸಿದ್ದ ಬಿ.ಜೆ.ಪಿ. ಮುಖಂಡನಿಗೆ ಬೆದರಿಕೆ

ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ಬಗ್ಗೆ ಮಾತನಾಡಿದರೆ, ಕೊಲೆ ಮಾಡುವುದಾಗಿ ಬಿ.ಜೆ.ಪಿ. ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಹಾಕಲಾಗಿದೆ.

ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಳಕಿ ಕೃಷ್ಣಮೂರ್ತಿ ಮಾತನಾಡುವ ಸಂದರ್ಭದಲ್ಲಿ ಈಶ್ವರಪ್ಪರನ್ನು ಟೀಕಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಪ್ರಶ್ನೆ ಎದುರಾದಾಗ ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲೇ ಭಾವುಕರಾಗಿದ್ದರು. ಪಕ್ಷದ ವಲಯದಲ್ಲಿಯೂ ಬಿಳಕಿ ಕೃಷ್ಣಮೂರ್ತಿ ಹೇಳಿಕೆ ಸಂಘರ್ಷಕ್ಕೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಅವರಿಗೆ ಬೆದರಿಕೆ ಹಾಕಲಾಗಿದೆ. ಫೆಬ್ರವರಿ 16 ರಂದು ರಾತ್ರಿ 8.30 ಕ್ಕೆ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದಿದ್ದ ಇಬ್ಬರು ಯುವಕರು, ಈಶ್ವರಪ್ಪನವರ ಬಗ್ಗೆ ಮಾತನಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಿಳಕಿ ಕೃಷ್ಣಮೂರ್ತಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...