alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ.ಗೆ ಕಪ್ಪು ಬಟ್ಟೆ ಪ್ರದರ್ಶನ: BJP ಕಾರ್ಯಕರ್ತರು ಅರೆಸ್ಟ್

 

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ಸಂದರ್ಭದಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿ.ಜೆ.ಪಿ. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಶನಿವಾರ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಸಾಗರ, ತೀರ್ಥಹಳ್ಳಿಯಲ್ಲಿ ಸಮಾವೇಶ ಮುಗಿಸಿ ಸಂಜೆ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

ನೆಹರೂ ಮೈದಾನದಲ್ಲಿ ಸಮಾವೇಶ ನಡೆಯುವ ಸ್ಥಳಕ್ಕೆ ಸಿದ್ಧರಾಮಯ್ಯ ತೆರಳುವ ಸಂದರ್ಭದಲ್ಲಿ ಬಿ.ಜೆ.ಪಿ. ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಲ್ಲದೇ, ಸಿ.ಎಂ. ಸಿದ್ಧರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗಿದ್ದಾರೆ.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಹಲವು ಕಡೆಗಳಲ್ಲಿ ಬಿ.ಜೆ.ಪಿ. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...