alex Certify
ಕನ್ನಡ ದುನಿಯಾ       Mobile App
       

Kannada Duniya

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ

ಶಿವಮೊಗ್ಗ: ಜಿಲ್ಲಾಡಳಿತದ ನಿಷೇಧದ ನಡುವೆಯೂ ನಡೆಯುತ್ತಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ ಸಂಭವಿಸಿದೆ. ಶಿವಮೊಗ್ಗ ಸಮೀಪದ ಆಯನೂರು ಕೋಟೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ಸಾವು ಕಂಡಿದ್ದಾರೆ.

ಬಾಳೆಕೊಪ್ಪದ 40 ವರ್ಷದ ಚಂದ್ರಶೇಖರ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆ ನಡೆಯವಾಗ ನಿಂತಿದ್ದ ಚಂದ್ರಶೇಖರ್ ಅವರಿಗೆ ಎದುರಿನಿಂದ ವೇಗವಾಗಿ ಬಂದ ಹೋರಿಯೊಂದು ಕೊಂಬಿನಿಂದ ತಿವಿದಿದೆ.

ಚಂದ್ರಶೇಖರ್ ಹೊಟ್ಟೆಯ ಕೆಳಭಾಗದಲ್ಲಿ ಹೋರಿ ತಿವಿತದಿಂದ ತೀವ್ರ ರಕ್ತಸ್ರಾವವಾಗಿದ್ದು, ಅಲ್ಲಿದ್ದವರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.

ಸುದ್ದಿ ತಿಳಿದ ಕುಂಸಿ ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಷೇಧಾಜ್ಞೆ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದ ಸಂಘಟಕರ ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...