alex Certify
ಕನ್ನಡ ದುನಿಯಾ       Mobile App
       

Kannada Duniya

ಜಾನುವಾರು ಸಾಗಣೆ ತಡೆದ ಗೋರಕ್ಷಕರ ಮೇಲೆ ಹಲ್ಲೆ

ಶಿವಮೊಗ್ಗ: ಜಾನುವಾರು ಸಾಗಿಸುತ್ತಿದ್ದ ವಾಹನ ತಡೆದು ಪ್ರಶ್ನಿಸಿದ ಯುವಕರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ.

ಶಿರಾಳಕೊಪ್ಪದಿಂದ 30 ಕ್ಕೂ ಅಧಿಕ ದನಗಳನ್ನು ಲಾರಿಯಲ್ಲಿ ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪಡೆದ ಐವರು ಗೋ ರಕ್ಷಕರು ವಾಹನ ತಡೆದು ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಗಲಾಟೆ ನಡೆದಿದ್ದು, ಜಾನುವಾರು ಸಾಗಿಸುತ್ತಿದ್ದವರು ಫೋನ್ ಮಾಡಿ ತಮ್ಮ ಕಡೆಯವರನ್ನು ಕರೆಸಿಕೊಂಡಿದ್ದಾರೆ.

2 ಕಾರ್ ಹಾಗೂ 15 ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಗೋರಕ್ಷಕರನ್ನು ಹಿಗ್ಗಾಮುಗ್ಗಾ ಥಳಿಸಿ, ಜಾನುವಾರುಗಳೊಂದಿಗೆ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿದ್ದು, ಗೋರಕ್ಷಕರು ನೀಡಿದ ದೂರಿನ ಮೇರೆಗೆ ಶಿರಾಳಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಘಟನೆಯಿಂದಾಗಿ ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಎ.ಎಸ್.ಪಿ. ಮುತ್ತುರಾಜ್ ಹಾಗೂ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹಲ್ಲೆ ನಡೆಸಿದವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...