alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ, ವೈದ್ಯನಿಂದ ದೋಖಾ

ಶಿವಮೊಗ್ಗ: ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟುವಿಗೆ ಮದುವೆಯಾಗುವುದಾಗಿ ನಂಬಿಸಿದ್ದ ಕಲಬುರಗಿ ವೈದ್ಯನ ವಿರುದ್ಧ ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇತ್ತೀಚೆಗಷ್ಟೇ ಸುದ್ದಿಯಾಗಿತ್ತು.

ಈ ವೈದ್ಯ ಶಿವಮೊಗ್ಗದಲ್ಲಿ ಬೇರೆ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದು, ಇದೇ ವೇಳೆ ಮಹಿಳಾ ಕ್ರೀಡಾಪಟು ಮಹಾರಾಷ್ಟ್ರ ಪೊಲೀಸರೊಂದಿಗೆ ಎಂಟ್ರಿ ಕೊಟ್ಟಿದ್ದಾರೆ. ವೈದ್ಯ ಮದುವೆ ನಿಲ್ಲಿಸಿ ಪರಾರಿಯಾಗಿದ್ದಾನೆ.

ಕಲಬುರಗಿಯ ವೈದ್ಯ ಸಾಮಾಜಿಕ ಜಾಲತಾಣದಲ್ಲಿ ಮಹಾರಾಷ್ಟ್ರ ಕೊಲ್ಲಾಪುರದ ಕ್ರೀಡಾಪಟುವನ್ನು ಪರಿಚಯಿಸಿಕೊಂಡಿದ್ದು, ಆಗಾಗ ಭೇಟಿ ಮಾಡಿದ್ದಾನೆ. ಅಲ್ಲದೇ, ಗೋವಾ, ಬೆಂಗಳೂರು ಮೊದಲಾದ ಕಡೆಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಗೆ ಕೈಕೊಟ್ಟಿದ್ದಾನೆ. ವೈದ್ಯನ ವಿರುದ್ಧ ಕೊಲ್ಲಾಪುರ ಪೊಲೀಸರಿಗೆ ದೂರು ನೀಡಿದ್ದ ಯುವತಿ ನಂತರದಲ್ಲಿ ಕಲಬುರಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮದುವೆ ನಡೆಯುವ ಸಂದರ್ಭದಲ್ಲಿ ಆಕೆ ಮಂಟಪಕ್ಕೆ ಬಂದಿದ್ದರಿಂದ ವೈದ್ಯ ಅಲ್ಲಿಂದ ಪರಾರಿಯಾಗಿದ್ದಾನೆ. ಆತ ಪರಾರಿಯಾಗಲು ಪೊಲೀಸರೇ ಕಾರಣ ಎಂದು ಕ್ರೀಡಾಪಟು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...