alex Certify
ಕನ್ನಡ ದುನಿಯಾ       Mobile App
       

Kannada Duniya

‘ರೈತರು, ಸ್ತ್ರೀ ಶಕ್ತಿ, ನೇಕಾರರ ಸಾಲ ಮನ್ನಾ’

ಶಿವಮೊಗ್ಗ: ಜೆ.ಡಿ.ಎಸ್. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು, ಮೀನುಗಾರರು ಹಾಗೂ ನೇಕಾರರ ಸಾಲವನ್ನು ಮನ್ನಾ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

ತೀರ್ಥಹಳ್ಳಿಯ ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ವಿಕಾಸ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ. 24 ಗಂಟೆಯೊಳಗೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಾಲವನ್ನು ಮನ್ನಾ ಮಾಡುವ ಜೊತೆಗೆ ಮುಂದೆ ಸಾಲವನ್ನು ಮಾಡದಂತೆ ಜೀವನ ನಡೆಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳ ವಸೂಲಾಗದ ಸುಮಾರು 81,000 ಕೋಟಿ ರೂ. ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. ರಾಜ್ಯಕ್ಕೆ ಬರುವ ಪ್ರಧಾನಿ ಮೋದಿ ಮತ್ತು ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಅವರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...