alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಸ್ಪರ್ಧೆ ಖಚಿತ

ಬೆಂಗಳೂರು: ಶಿವಮೊಗ್ಗ ವಿಧಾನಸಭೆ ಕ್ಷೇತ್ರದಿಂದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬೇಡಿ. ಪಕ್ಷದ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡರಿಗೆ ಟಿಕೆಟ್ ಕೊಡಿ ಎಂದು ಇತ್ತೀಚೆಗೆ ಕೆಲವು ಮುಖಂಡರು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು.

ಕಳೆದ ಚುನಾವಣೆಯಲ್ಲಿ ಕೆ.ಜೆ.ಪಿ.ಯಿಂದ ರುದ್ರೇಗೌಡ ಸ್ಪರ್ಧಿಸಿದ್ದರು. ಈಗ ಅವರೇ ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾಗಿದ್ದಾರೆ. ಅವರನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿದ್ದ ಸಂದರ್ಭದಲ್ಲಿ ಈಶ್ವರಪ್ಪ ಆಕ್ಷೇಪಿಸಿದ್ದರು. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪಿಸಿ ದೆಹಲಿವರೆಗೂ ಹೋಗಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು. ವರಿಷ್ಠರು ಇಬ್ಬರೂ ನಾಯಕರೊಂದಿಗೆ ಚರ್ಚಿಸಿ ಸಮಾಧಾನಪಡಿಸಿದ್ದರು.

ಇದೆಲ್ಲದರ ನಡುವೆ ಮುಂದಿನ ಚುನಾವಣೆಗೆ ತಯಾರಿಯಲ್ಲಿರುವ ಬಿ.ಜೆ.ಪಿ.ಗೆ ಶಿವಮೊಗ್ಗದಲ್ಲಿ ಟಿಕೆಟ್ ವಿಚಾರವಾಗಿ ಗೊಂದಲ ಉಂಟಾಗಿತ್ತು. ಈ ಗೊಂದಲಗಳಿಗೆ ತೆರೆ ಬಿದ್ದಿದ್ದು, ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ಖಚಿತವಾಗಿದೆ. ಬಿ.ಜೆ.ಪಿ. ಚುನಾವಣಾ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಚುನಾವಣೆಗೆ ಸಿದ್ಧರಾಗುವಂತೆ ಈಶ್ವರಪ್ಪನವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...