alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಮಾಡಿದ್ದೀಗೆ….

ಶಿವಮೊಗ್ಗ: ಪ್ರೀತಿ ನಿರಾಕರಿಸಿದ ಯುವತಿಯ ಸಹೋದರನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಬೊಮ್ಮನಕಟ್ಟೆ ನಿವಾಸಿ ಹಬೀಬ್(21) ಇಂತಹ ಕೃತ್ಯವೆಸಗಿದವ. ಯುವತಿ 8 ನೇ ತರಗತಿ ಓದುವಾಗಲೇ ಆಕೆಯನ್ನು ಪ್ರೀತಿಸಿದ್ದ ಹಬೀಬ್, ಬಾಲಕಿಯ ಪೋಷಕರು ಬುದ್ಧಿವಾದ ಹೇಳಿದಾಗ 5 ವರ್ಷಗಳಿಂದ ದೂರವಿದ್ದ. ಇತ್ತೀಚೆಗೆ ಕಾಲೇಜಿಗೆ ಹೋಗಿ ಬರುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಕಾಡಿಸಿದ್ದಾನೆ.

ಆಕೆ ಪ್ರೀತಿಸಲು ನಿರಾಕರಿಸಿದ್ದು, ದಿನಾಲು ಸಹೋದರನೊಂದಿಗೆ ಕಾಲೇಜಿಗೆ ಹೋಗಿ ಬರುತ್ತಿದ್ದಳು. ಹಬೀಬ್  ಸ್ನೇಹಿತರೊಂದಿಗೆ ಸೇರಿ ಯುವತಿಯ ಸಹೋದರನನ್ನು ಅಪಹರಿಸಿ ಹಲ್ಲೆ ನಡೆಸಿದ್ದಾನೆ. ಪೋಷಕರು ಕೋಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಹಬೀಬ್ ನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...