alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರೀತಿಸಿ ಮದುವೆಯಾದ ಪುತ್ರ, ದುಡುಕಿದ ತಂದೆ

ಶಿವಮೊಗ್ಗ: ಪುತ್ರ ಬೇರೆ ಜಾತಿ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರಿಂದ ಮನನೊಂದ ವ್ಯಕ್ತಿಯೊಬ್ಬರು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರಬಿಳಚಿ ವಡ್ಡರಹಟ್ಟಿ ನಿವಾಸಿ ಕುಮಾರಪ್ಪ(50) ಮೃತಪಟ್ಟವರು. ಕುಮಾರಪ್ಪ ಅವರ ಪುತ್ರ, ಮಾರಶೆಟ್ಟಿಹಳ್ಳಿ ಗ್ರಾಮದ ಯುವತಿಯನ್ನು ಪ್ರೀತಿಸಿದ್ದು, ಇತ್ತೀಚೆಗೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಾರೆ.

ಇದರಿಂದ ನೊಂದ ಕುಮಾರಪ್ಪ ದಂಪತಿ ವಿಷ ಸೇವಿಸಿದ್ದು, ಇಬ್ಬರನ್ನೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕುಮಾರಪ್ಪ ಮೃತಪಟ್ಟಿದ್ದಾರೆ.

ತಂದೆ ಮೃತಪಟ್ಟ ಹಿನ್ನಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದ ಯುವಕ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಬಿಗುವಿನ ವಾತಾವರಣ ಉಂಟಾಗಿದೆ. ಅಂತ್ಯಕ್ರಿಯೆಗೆ ಯುವತಿ ಆಗಮಿಸಿರಲಿಲ್ಲ. ಆಕೆಯನ್ನು ಸಂಬಂಧಿಕರ ಮನೆಯಲ್ಲಿರಿಸಲಾಗಿದೆ. ಅಂತ್ಯಕ್ರಿಯೆ ವೇಳೆ ಹೊಳೆಹೊನ್ನೂರು ಠಾಣೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...