alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಕಾಶ್ ರೈ, ಜಿಗ್ನೇಶ್ ಮೇವಾನಿ ವಿರುದ್ಧ ಕಪ್ಪು ಬಾವುಟ ಪ್ರದರ್ಶನ

ಶಿವಮೊಗ್ಗ: ಶಿವಮೊಗ್ಗದಲ್ಲಿ ಖ್ಯಾತ ನಟ ಪ್ರಕಾಶ್ ರೈ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲಾಗಿದೆ.

ಶಿವಮೊಗ್ಗದ ಎನ್.ಡಿ.ವಿ. ಹಾಸ್ಟೆಲ್ ಮೈದಾನದಲ್ಲಿ ಸಂವಿಧಾನ ಉಳಿವಿಗಾಗಿ ಕರ್ನಾಟಕ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶದಲ್ಲಿ ಪ್ರಕಾಶ್ ರೈ ಮತ್ತು ಜಿಗ್ನೇಶ್ ಮೇವಾನಿ ಭಾಗವಹಿಸಿದ್ದಾರೆ.

ಸಂವಿಧಾನದ ಬಗ್ಗೆ ಮಾತನಾಡಲು ಇಬ್ಬರಿಗೂ ನೈತಿಕತೆ ಇಲ್ಲವೆಂದು ಆರೋಪಿಸಿ ಬಿ.ಜೆ.ಪಿ. ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಸಮಾವೇಶದ ಸ್ಥಳಕ್ಕೆ ನುಗ್ಗಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆಯಿಂದಾಗಿ ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಸಮಾವೇಶದ ಸ್ಥಳಕ್ಕೆ ಪ್ರತಿಭಟನಾಕಾರರನ್ನು ಬಿಡದೇ ಬಂಧಿಸಿ ಕರೆದೊಯ್ದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...