alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್ !

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ ಕಾಮುಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬಾಲಕಿ ಮಗುವಿಗೆ ಜನ್ಮ ನೀಡಿದ್ದು, ಅದು ಮೃತಪಟ್ಟಿದೆ.

ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷದ ನವೀನ್ ಎಂಬಾತನೇ ಇಂತಹ ಕೃತ್ಯವೆಸಗಿದವ.

15 ವರ್ಷದ ಬಾಲಕಿಯ ಸಂಬಂಧಿಯಾಗಿರುವ ನವೀನ್ ಆಕೆಯ ಮನೆಯಲ್ಲಿಯೇ ವಾಸವಾಗಿದ್ದು, ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ.

ಬಾಲಕಿಗೆ ವಾಂತಿಯಾಗಿದ್ದು, ಪೋಷಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಆದರೂ, ವಾಂತಿ ನಿಲ್ಲದ ಕಾರಣ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ದ ಸಂದರ್ಭದಲ್ಲಿ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಬಾಲಕಿ ನವೀನನ ಬಗ್ಗೆ ತಿಳಿಸಿದ್ದು, ನಂತರದಲ್ಲಿ ಆಕೆಗೆ ಅವಧಿ ಪೂರ್ವ ಹೆರಿಗೆಯಾಗಿ ಮಗು ಮೃತಪಟ್ಟಿದೆ. ಹೊಳೆಹೊನ್ನೂರು ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...