alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲಿಯೇ ಮೃತಪಟ್ಟ ಮುಖ್ಯ ಶಿಕ್ಷಕ

smg-teacher

ಶಿವಮೊಗ್ಗ: ಶಾಲೆಯಲ್ಲಿಯೇ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಡಿ.ಬಿ. ಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಮುಖ್ಯ ಶಿಕ್ಷಕ ಮಲ್ಲಾ ನಾಯ್ಕ(59) ಮೃತಪಟ್ಟವರು. ಸೋಮವಾರ ಬೆಳಿಗ್ಗೆ ತರಗತಿ ಆರಂಭವಾದ ಸಂದರ್ಭದಲ್ಲಿ ಅವರು ಮಕ್ಕಳಿಗೆ ಹಾಲು ವಿತರಿಸಲು ಸೂಚಿಸಿ, ಅಡುಗೆ ಕೋಣೆಗೆ ತೆರಳಿದ್ದಾಗಲೇ ಹಠಾತ್ ಹೃದಯಾಘಾತವಾಗಿದೆ.

ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಕೂಡಲೇ ಗ್ರಾಮಸ್ಥರ ನೆರವಿನೊಂದಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಈ ವೇಳೆಗಾಗಲೇ ಮಲ್ಲಾ ನಾಯ್ಕ ಮೃತಪಟ್ಟಿದ್ದರೆನ್ನಲಾಗಿದೆ.

ಶಾಲೆಯ ಆವರಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಶಿಕ್ಷಕರ ಸಾವಿಗೆ ಮಕ್ಕಳು ಕಣ್ಣೀರಿಟ್ಟಿದ್ದು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮರವಂಜಿ ತಾಂಡಾದವರಾಗಿದ್ದ ಮಲ್ಲಾ ನಾಯ್ಕ 10 ವರ್ಷಗಳಿಂದ ಡಿ.ಬಿ. ಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...