alex Certify
ಕನ್ನಡ ದುನಿಯಾ       Mobile App
       

Kannada Duniya

ನೈತಿಕ ಪೊಲೀಸ್ ಗಿರಿ ಪ್ರಕರಣ: ವಿದ್ಯಾರ್ಥಿನಿ ಪರ ಪ್ರತಿಭಟನೆ

ಶಿವಮೊಗ್ಗ: ಗೆಳೆಯ ಹಾಗೂ ಗೆಳತಿಯೊಂದಿಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ, ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

ಯುವತಿಗೆ ಕಿರುಕುಳ ನೀಡಿದ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ಶಿವಮೊಗ್ಗದ ವಿದ್ಯಾರ್ಥಿನಿಯ ಸ್ನೇಹಿತರು, ಕುಟುಂಬದವರು ಹಾಗೂ ಸಂಘಟನೆಯೊಂದರ ಕಾರ್ಯಕರ್ತರು ದೊಡ್ಡಪೇಟೆ ಠಾಣೆ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಅನ್ಯ ಕೋಮಿಗೆ ಸೇರಿದ, ತನ್ನದೇ ಕಾಲೇಜಿನ ಗೆಳೆಯ ಮತ್ತು ಗೆಳತಿಯೊಂದಿಗೆ ವಿದ್ಯಾರ್ಥಿನಿ ತೆರಳುವಾಗ, ಆಕೆಯ ಕೋಮಿಗೆ ಸೇರಿದ ಸ್ಥಳೀಯ ಯುವಕರು ಅಡ್ಡಗಟ್ಟಿ ಮೂವರನ್ನೂ ಬೆದರಿಸಿದ್ದಾರೆ. ಯುವತಿಯ ಮೊಬೈಲ್ ನಲ್ಲಿದ್ದ ಫೋಟೋಗಳನ್ನು ಶೇರ್ ಇಟ್ ನಲ್ಲಿ ಕಳಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಈ ಪ್ರಕರಣ ಬಹಿರಂಗವಾಗುತ್ತಲೇ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿದ್ಯಾರ್ಥಿನಿಯ ಪರವಾಗಿ ಪೊಲೀಸರಿಗೆ ಮನವಿ ಸಲ್ಲಿಸಿ, ಬೆದರಿಕೆ ಹಾಕಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...