alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವ ದೇವಾಲಯಗಳಿಗೆ ಹರಿದು ಬಂತು ಭಕ್ತರ ದಂಡು

ಶಿವರಾತ್ರಿ ಹಬ್ಬದ ಅಂಗವಾಗಿ ಮಂಗಳವಾರದಂದು ನಾಡಿನೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಬೆಳಿಗ್ಗೆಯಿಂದಲೇ ಭಕ್ತರು ಶಿವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಶಿವನ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಭಕ್ತರು ಶಿವನನ್ನು ಆರಾಧಿಸಿದರು.

ನಾಡಿನ ಎಲ್ಲಾ ಶಿವಾಲಯಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸರದಿ ಸಾಲಿನಲ್ಲಿ ನಿಂತು ಶಿವನ ದರ್ಶನ ಪಡೆದ ಭಕ್ತರು ಪುನೀತರಾದರು. ಭಕ್ತರಿಗೆ ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಕೆಲವು ಶಿವಾಲಯಗಳಿಗಂತೂ ಬಹು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಯಾವುದೇ ತೊಂದರೆಯಾಗದಂತೆ ದೇವಾಲಯ ಸಮಿತಿಗಳಿಂದ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಶಿವರಾತ್ರಿ ಜಾಗರಣೆ ಪ್ರಯುಕ್ತ ಕೆಲವು ಕಡೆಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...