alex Certify
ಕನ್ನಡ ದುನಿಯಾ       Mobile App
       

Kannada Duniya

ನಾಡಿನೆಲ್ಲೆಡೆ ಶಿವರಾತ್ರಿ ಆಚರಣೆ

lord-shiva

ಬೆಂಗಳೂರು: ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ ಜೋರಾಗಿದ್ದು, ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ಶಿವನ ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಬೆಂಗಳೂರಿನ ಗವಿ ಗಂಧಾಧರೇಶ್ವರ ದೇವಾಲಯ, ಮಲ್ಲೇಶ್ವರಂ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಿಗೆ ಬೆಳಿಗ್ಗೆಯಿಂದಲೇ ಭಕ್ತರು ಆಗಮಿಸಿ ದರ್ಶನ ಪಡೆದಿದ್ದಾರೆ.

ಗೋಕರ್ಣ, ಮುರ್ಡೇಶ್ವರ ಮೊದಲಾದ ಕಡೆಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಭಕ್ತರಿಗೆ ತೊಂದರೆಯಾಗದಂತೆ ದೇವಾಲಯ ಸಮಿತಿಗಳಿಂದ ವ್ಯವಸ್ಥೆ ಮಾಡಲಾಗಿತ್ತು.

ಸರತಿ ಸಾಲಿನಲ್ಲಿ ನಿಂತು ಭಕ್ತರು ಶಿವನ ದರ್ಶನ ಪಡೆಯುವ ದೃಶ್ಯ ದೇವಾಲಯಗಳಲ್ಲಿ ಕಂಡು ಬಂದಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...