alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ.- ಜಮೀರ್ ಜಗಳಕ್ಕಾಗಿ ಕಾಯುತ್ತಿದ್ದಾರೆ ಶೋಭಾ ಕರಂದ್ಲಾಜೆ

ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಹಿಂದೆ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಜಮೀರ್ ಅಹಮದ್ ಯಾವ ಭಾಷೆಯಲ್ಲಿ ಕಿತ್ತಾಡಿಕೊಂಡಿದ್ದಾರೆಂಬುದನ್ನು ನೋಡಿದ್ದೇವೆ. ಈಗ ಅವರು ಜಗಳವಾಡುವುದನ್ನು ಕಾದು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರ ಬಗ್ಗೆ ಕಾಳಜಿ ಇಲ್ಲದ ಹಾಗೂ ಅವ್ಯವಹಾರ ನಡೆಸಿದವರು ಇಂದು ಅಧಿಕಾರಕ್ಕಾಗಿ ಒಂದಾಗಿದ್ದಾರೆ ಎಂದು ಕಿಡಿ ಕಾರಿದರು.

ತಮಗೆ ಇಂತಹುದೇ ಕಾರು ಬೇಕೆಂದು ಹೇಳುವ ಮೂಲಕ ಸಚಿವ ಜಮೀರ್ ಅಹಮದ್ ಆಹಂ ಪ್ರದರ್ಶಿಸಿದ್ದಾರೆ. ಸರ್ಕಾರ ಅವರ ಮಾತಿಗೆ ಮಣಿಯಬಾರದು. ಇದನ್ನು ಒಪ್ಪಿಕೊಂಡರೆ ಮುಂದೆ ಬೇರೆಯವರು ಇದನ್ನೇ ಅನುಸರಿಸುತ್ತಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...