alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಾಹುಬಲಿ’ಗೆ 5 ನೇ ದಿನದ ಮಹಾಮಸ್ತಕಾಭಿಷೇಕ ಸಂಭ್ರಮ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ 5 ನೇ ದಿನದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ದೃಶ್ಯ ವೈಭವ ಕಣ್ತುಂಬಿಕೊಳ್ಳಲು ಜನ ಸಾಗರವೇ ಹರಿದುಬಂದಿದೆ.

ಮೊದಲಿಗೆ 1008 ಕಳಶದ ಜಲಾಭಿಷೇಕ ನೆರವೇರಿಸಿದ ನಂತರ, 21 ಬಗೆ ಅಷ್ಟ ದ್ರವ್ಯಗಳ ಅಭಿಷೇಕ ನಡೆಯಲಿದ್ದು, ಎಳನೀರು, ಕಷಾಯ, ಅರಿಶಿಣ, ಚಂದನ, ಕೇಸರಿ, ಕ್ಷೀರ ಹಾಗೂ ಪಂಚಾಮೃತ ಅಭಿಷೇಕ ನೆರವೇರಲಿದೆ.

ಫೆಬ್ರವರಿ 25 ಕ್ಕೆ ಈ ಶತಮಾನದ 2ನೇ ಮಹಾಮಸ್ತಕಾಭಿಷೇಕಕ್ಕೆ ತೆರೆ ಬೀಳಲಿದೆ. ಮಹಾಮಜ್ಜನವನ್ನು ಕಳೆದ 4 ದಿನಗಳಲ್ಲಿ ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. ಮಹಾಮಜ್ಜನದ ವೇಳೆಯಲ್ಲಿ ವಿವಿಧ ವರ್ಣಗಳಲ್ಲಿ ಕಂಗೊಳಿಸುವ ವಿರಾಗಿಯನ್ನು ಕಂಡ ಭಕ್ತರು ಭಾವಪರವಶರಾಗಿದ್ದಾರೆ. ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...