alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಲಿಕಾಪ್ಟರ್ ಮೂಲಕ ಗೊಮ್ಮಟೇಶ್ವರನಿಗೆ ಪುಷ್ಪವೃಷ್ಟಿ ಮಾಡಲಿರುವ ಮೋದಿ

ಹಾಸನ: ಶ್ರವಣಬೆಳಗೊಳದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ದೇಶ, ವಿದೇಶಗಳಿಂದಲೂ ಪ್ರವಾಸಿಗರು, ಭಕ್ತರ ದಂಡೇ ಹರಿದು ಬರುತ್ತಿದೆ.

ರಾಷ್ಟ್ರಪತಿ, ಉಪರಾಷ್ಟ್ರಪತಿ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸವಕ್ಕೆ ಆಗಮಿಸಲಿದ್ದಾರೆ.

ಫೆಬ್ರವರಿ 19 ರಂದು ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಶ್ರವಣಬೆಳಗೊಳಕ್ಕೆ ಆಗಮಿಸಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ನಿರ್ಮಿಸಿದ ಆಸ್ಪತ್ರೆ, ವಿಂಧ್ಯಗಿರಿ ಮೆಟ್ಟಿಲು ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಯ ಮತ್ತು ಭದ್ರತೆಯ ಕಾರಣದಿಂದ ಅವರು ಬೆಟ್ಟವನ್ನು ಹತ್ತುವುದಿಲ್ಲ. ಹೆಲಿಕಾಪ್ಟರ್ ನಿಂದಲೇ ಗೊಮ್ಮಟೇಶ್ವರನಿಗೆ ಪುಷ್ಪವೃಷ್ಟಿ ಮಾಡಲಿದ್ದಾರೆ ಎನ್ನಲಾಗಿದೆ.

ಮಹಾಮಸ್ತಕಾಬಿಷೇಕದ ಅಂಗವಾಗಿ ವಿವಿಧ ಕಾರ್ಯಗಳು ನಡೆದಿದೆ. ಇಂದು ಮಧ್ಯಾಹ್ನ ನಡೆಯಲಿರುವ ಮೆರವಣಿಗೆಯಲ್ಲಿ ಸಹಸ್ರಾರು ಕಲಾವಿದರು, ಭಕ್ತರು ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...