alex Certify
ಕನ್ನಡ ದುನಿಯಾ       Mobile App
       

Kannada Duniya

ಶತಮಾನದ 2 ನೇ ಮಹಾಮಸ್ತಕಾಭಿಷೇಕಕ್ಕೆ ಕ್ಷಣಗಣನೆ

ಹಾಸನ: ಶ್ರವಣಬೆಳಗೊಳದ ಐತಿಹಾಸಿಕ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7 ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಮಹೋತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಧಾರ್ಮಿಕ ಕಾರ್ಯಗಳು ನಡೆದಿವೆ.

ಇಂದಿನಿಂದ ಮಹಾ ಮಜ್ಜನ ಆರಂಭವಾಗಲಿದೆ. ಬೆಳಿಗ್ಗೆಯಿಂದಲೇ ಭಕ್ತರ ದಂಡು ವಿಂಧ್ಯಗಿರಿ ಬೆಟ್ಟಕ್ಕೆ ಹರಿದು ಬರುತ್ತಿದೆ. ವಿ.ಐ.ಪಿ. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವಿದ್ದು, ಸಂಜೆಯಿಂದ ಜನಸಾಮಾನ್ಯರಿಗೆ ಪ್ರವೇಶ ನೀಡಲಾಗುವುದು. ಮುಖ್ಯಮಂತ್ರಿ ಸಿದ್ಧರಾಮಯ್ಯ ಮಧ್ಯಾಹ್ನ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ವರ್ಧಮಾನ ಸಾಗರ ಮಹಾರಾಜ್ ಅವರ ನೇತೃತ್ವದಲ್ಲಿ ಮಹಾಮಸ್ತಕಾಭಿಷೇಕ ವಿಧಿವಿಧಾನಗಳು ನಡೆದಿವೆ. ದಿಗಂಬರ ಮುನಿಗಳು, ಆಚಾರ್ಯರು ಅಭಿಷೇಕ ನೆರವೇರಿಸಲಿದ್ದಾರೆ.

ಜರ್ಮನ್ ತಂತ್ರಜ್ಞಾನದ ಅಟ್ಟಣಿಗೆಯನ್ನು ನಿರ್ಮಿಸಲಾಗಿದ್ದು, 5000 ಮಂದಿ ಕುಳಿತು ಮಹಾಮಸ್ತಕಾಭಿಷೇಕವನ್ನು ವೀಕ್ಷಿಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...