alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಆಗಮನ, ನಾಳೆ ಮಹಾಮಸ್ತಕಾಭಿಷೇಕಕ್ಕೆ ಚಾಲನೆ

ಬೆಂಗಳೂರು: ಶ್ರವಣಬೆಳಗೊಳದಲ್ಲಿ ನಾಳೆಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಶೇಷ ವಿಮಾನದಲ್ಲಿ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ವಜೂಭಾಯ್ ವಾಲಾ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವ ಕೆ.ಜೆ. ಜಾರ್ಜ್ ಹಾಗೂ ಹಿರಿಯ ಅಧಿಕಾರಿಗಳು ಸ್ವಾಗತಿಸಿದ್ದಾರೆ.

ರಾಜ್ಯಪಾಲರು ಇಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದು, ಬೆಳಿಗ್ಗೆ ಶ್ರವಣಬೆಳಗೊಳಕ್ಕೆ ತೆರಳಲಿದ್ದಾರೆ. ಪ್ರತಿ 12 ವರ್ಷಗಳಿಗೊಮ್ಮೆ ಬಾಹುಬಲಿ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಲಕ್ಷಾಂತರ ಮಂದಿ ಪಾಲ್ಗೊಳ್ಳಲಿದ್ದಾರೆ. ಮಹೋತ್ಸವಕ್ಕೆ ನಾಳೆ ರಾಷ್ಟ್ರಪತಿಗಳು ಚಾಲನೆ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...