alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾಮೀಜಿ ವಿರುದ್ಧ ಮತ್ತೊಂದು ದೂರು

ವಿಜಯಪುರ: ಪ್ರತ್ಯೇಕ ಧರ್ಮ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ವಿವಾದಿತ ಹೇಳಿಕೆ ನೀಡಿದ್ದ, ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಸಮಾವೇಶದಲ್ಲಿ ಶ್ರೀಗಳು ಒಬ್ಬ ತಂದೆಗೆ ಹುಟ್ಟಿದವರು ಲಿಂಗಾಯತರು, ಐವರು ತಂದೆಗೆ ಹುಟ್ಟಿದವರು ವೀರಶೈವರು ಎಂದು ಹೇಳಿಕೆ ನೀಡಿದ್ದರು.

ವೀರಶೈವರ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಶ್ರೀಗಳ ವಿರುದ್ಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಗೆ ಮಹಾಂತೇಶ ಗಿರಿಮಠ ದೂರು ನೀಡಿದ್ದರು.

ಇಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಧವಳಗಿ ಗದ್ದುಗೆ ಮಠದ ಮಡಿವಾಳೇಶ್ವರ ಸ್ವಾಮೀಜಿಯವರು, ಜಯಬಸವ ಮೃತ್ಯುಂಜಯ ಶ್ರೀಗಳ ವಿರುದ್ಧ ಮುದ್ದೇಬಿಹಾಳ ಠಾಣೆಗೆ ದೂರು ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...