alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧಗಂಗಾ ಶ್ರೀಗಳ 111 ನೇ ಜನ್ಮ ದಿನೋತ್ಸವ, ಮಠಕ್ಕೆ ಲಕ್ಷಾಂತರ ಭಕ್ತರ ದಂಡು

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ 111 ನೇ ಜನ್ಮ ದಿನೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಮಠಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ.

ಸಿದ್ಧಗಂಗಾ ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿಗಳ ಗುರವಂದನಾ ಮಹೋತ್ಸವ ಮತ್ತು 111 ನೇ ಜನ್ಮ ದಿನೋತ್ಸವ ಆಚರಣೆ ನಡೆಯಲಿದ್ದು, ವಿವಿಧೆಡೆಯಿಂದ ಆಗಮಿಸಿರುವ ಭಕ್ತರು, ನಡೆದಾಡುವ ದೇವರ ದರ್ಶನಕ್ಕೆ ಕಾದಿದ್ದಾರೆ.

ಸ್ವಾಮೀಜಿಯವರ ಪಾದಪೂಜೆಗೆ ವ್ಯವಸ್ಥೆ ಮಾಡಲಾಗಿದ್ದು, ಪ್ರತ್ಯೇಕ ಭೇಟಿಗೆ ಅವಕಾಶ ಇರುವುದಿಲ್ಲ. ಬೆಳಿಗ್ಗೆಯಿಂದಲೇ ಉಪಾಹಾರ ವ್ಯವಸ್ಥೇ ಮಾಡಲಾಗಿದೆ. ಊಟದ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಭಕ್ಷ್ಯ ಭೋಜನ ಸಿದ್ಧಪಡಿಸಲಾಗ್ತಿದೆ.

ಜನ್ಮದಿನೋತ್ಸವದಲ್ಲಿ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ. ವಿಧಾನಸಭೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ರಾಜಕೀಯ ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿಲ್ಲ. ಆದರೆ, ಗಣ್ಯರು, ರಾಜಕಾರಣಿಗಳು ಆಗಮಿಸಿ ಶ್ರೀಗಳ ಆಶೀರ್ವಾದ ಪಡೆಯಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...