alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧಗಂಗಾ ಶ್ರೀ ಭೇಟಿ ಮಾಡಿದ ಎಂ.ಬಿ. ಪಾಟೀಲ್

ತುಮಕೂರು : ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಗೊಂದಲ ಉಂಟಾದ ಹಿನ್ನಲೆಯಲ್ಲಿ ತುಮಕೂರು ಸಿದ್ಧಗಂಗಾ ಮಠಕ್ಕೆ ಸಚಿವ ಎಂ.ಬಿ. ಪಾಟೀಲ್ ಭೇಟಿ ನೀಡಿದ್ದಾರೆ.

ಖಾಸಗಿ ಕಾರಿನಲ್ಲಿ ಮಠಕ್ಕೆ ಆಗಮಿಸಿದ ಅವರು, ಶ್ರೀಗಳ ಆಶೀರ್ವಾದ ಪಡೆದು ಅವರೊಂದಿಗೆ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ.

ಸ್ವಾಮೀಜಿಯವರೊಂದಿಗೆ ಕೆಲ ಸಮಯ ಸಮಾಲೋಚನೆ ನಡೆಸಿ ಹೊರ ಬಂದ ಅವರು, ಎಲ್ಲಾ ಗೊಂದಲ ಬಗೆಹರಿದಿವೆ. ಎಲ್ಲವೂ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿಯವರು ನಮ್ಮ ಪಾಲಿನ ದೇವರಾಗಿದ್ದಾರೆ. ಸ್ವಾಮೀಜಿಯವರು ಹೇಳಿದಂತೆ ನಾವೆಲ್ಲಾ ಮುಂದುವರೆಯುತ್ತೇವೆ ಎಂದು ತಿಳಿಸಿದ್ದಾರೆ.

ಕಿರಿಯ ಶ್ರೀಗಳು ಮಾತನಾಡಿ, ಪಾಟೀಲ್ ಅವರು ಮಠಕ್ಕೆ ಭೇಟಿ ನೀಡಿದ ಬಳಿಕ ನಿರಾಳರಾಗಿದ್ದು, ಅವರು ಕ್ಷಮೆ ಕೇಳುವಂತಹ ಗುರುದ್ರೋಹವನ್ನೇನೂ ಮಾಡಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...