alex Certify
ಕನ್ನಡ ದುನಿಯಾ       Mobile App
       

Kannada Duniya

‘ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಸಚಿವರ ಹೆಸರು ಹಾಕಿಸುತ್ತೇವೆ’

ರಾಜ್ಯ ಸರ್ಕಾರದ ವತಿಯಿಂದ ಮುಂದಿನ ತಿಂಗಳು ಆಚರಿಸಲಾಗುತ್ತಿರುವ ಟಿಪ್ಪು ಜಯಂತಿ ಸಂದರ್ಭದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸದಂತೆ ಕೇಂದ್ರ ಕೌಶಲಾಭಿವೃದ್ದಿ ಸಚಿವ ಅನಂತ ಕುಮಾರ್ ಹೆಗಡೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಷ್ಟಾಚಾರದಂತೆ ಅನಂತ ಕುಮಾರ್ ಹೆಗಡೆಯವರ ಹೆಸರನ್ನು ಅಹ್ವಾನ ಪತ್ರಿಕೆಯಲ್ಲಿ ಹಾಕಿಸುತ್ತೇವೆ ಎಂದಿದ್ದಾರೆ.

ಪೊಲೀಸ್ ಹುತಾತ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಅನಂತ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಿರುವ ಕಾರಣ ಶಿಷ್ಟಾಚಾರದಂತೆ ಅಹ್ವಾನ ಪತ್ರಿಕೆಯಲ್ಲಿ ಅವರ ಹೆಸರನ್ನು ಹಾಕಿಸುತ್ತೇವೆ. ಕಾರ್ಯಕ್ರಮಕ್ಕೆ ಬರುವುದು ಬಿಡುವುದು ಅವರಿಗೆ ಸಂಬಂಧಪಟ್ಟ ವಿಚಾರ ಎಂದರು.

ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಟಿಪ್ಪು ಸುಲ್ತಾನ್ ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಹೇಳಿದ ಸಿದ್ದರಾಮಯ್ಯ, ಒಬ್ಬ ಕೇಂದ್ರ ಸಚಿವರಾಗಿ ಅನಂತಕುಮಾರ್ ಹೆಗಡೆ ಈ ರೀತಿಯ ಹೇಳಿಕೆ ನೀಡಬಾರದಾಗಿತ್ತು ಎಂದರು.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...