alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ಧರಾಮಯ್ಯರಿಗೆ ರಾಜ್ಯದ ಜನರ ಹಿಡಿಶಾಪ’

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ. ಕುಂತಲ್ಲಿ, ನಿಂತಲ್ಲಿ ಅವರನ್ನು ಶಪಿಸುತ್ತಿದ್ದಾರೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಮೂರ್ಖ, ಲೂಟಿಕೋರ, ಹಗಲು ದರೋಡೆ ಮಾಡಿ ಎ.ಸಿ.ಬಿ. ಮೂಲಕ ಎಲ್ಲಾ ಭ್ರಷ್ಟರಿಗೆ ಕ್ಲೀನ್ ಚಿಟ್ ಕೊಡಿಸಿದ್ದಾರೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಸಿದ್ಧರಾಮಯ್ಯ ಕಾಂಗ್ರೆಸ್ ನ ಕೊನೆಯ ಮುಖ್ಯಮಂತ್ರಿಯಾಗಿದ್ದಾರೆ. ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮಿತ್ ಶಾ ಅವರು ಪ್ರತಿದಿನ 5 -6 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲು ಸೂಚಿಸಿದ್ದು, ಅದರಂತೆ ಪ್ರಚಾರಕ್ಕೆ ತೆರಳುತ್ತಿದ್ದೇನೆ. ಪ್ರಧಾನಿ ಮೋದಿ ಅವರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಲುಕ್ಯ ವೃತ್ತದ ಬಳಿ ಅಮಿತ್ ಶಾ ನಿವಾಸಕ್ಕೆ ಭೇಟಿ ನೀಡಿದ ಬಿ.ಎಸ್.ವೈ. ಸಮಾಲೋಚನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...