alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ –ಜೆ.ಡಿ.ಎಸ್.

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆ.ಡಿ.ಎಸ್. ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ರಾಜಭವನಕ್ಕೆ ತೆರಳಿದ್ದ ಮಾಜಿ ಸಿ.ಎಂ. ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬೀ ಆಜಾದ್, ಜೆ.ಡಿ.ಎಸ್. ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ಕಾಂಗ್ರೆಸ್ ಬೆಂಬಲದೊಂದಿಗೆ ಜೆ.ಡಿ.ಎಸ್. ಸರ್ಕಾರ ರಚಿಸಲಿದ್ದು, ಈ ಬಗ್ಗೆ ಎ.ಐ.ಸಿ.ಸಿ. ತೀರ್ಮಾನ ಕೈಗೊಂಡಿದೆ. ಅದರಂತೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ನೀಡಲು ಪತ್ರದ ಮೂಲಕ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಬಲ ನೀಡುವುದಾಗಿ ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡರಿಗೆ ಪತ್ರದ ಮೂಲಕ ತಿಳಿಸಲಾಗಿದೆ. ನಿಯೋಗದಲ್ಲಿ ನಮ್ಮ ಪಕ್ಷದ ಎಲ್ಲಾ ನಾಯಕರು ಮತ್ತು ಜೆ.ಡಿ.ಎಸ್. ಪಕ್ಷದ ನಾಯಕರು ಬಂದು ಎರಡೂ ಪಕ್ಷಗಳಿಂದ ಪತ್ರವನ್ನು ಕೊಡಲಾಗಿದೆ. 212 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 2 ಪಕ್ಷೇತರ, ಕಾಂಗ್ರೆಸ್ ನ 78, ಜೆ.ಡಿ.ಎಸ್.ನ 38 ಶಾಸಕರು ಸೇರಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದೇವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...