alex Certify
ಕನ್ನಡ ದುನಿಯಾ       Mobile App
       

Kannada Duniya

ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುತ್ತಾ ಮಾಜಿ ಸಿಎಂ ಸಿದ್ದರಾಮಯ್ಯನವರ ಔತಣ ಕೂಟ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರಿಗೆ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಶಕ್ತಿ ಪ್ರದರ್ಶನಕ್ಕೆ ಔತಣ ಕೂಟ ವೇದಿಕೆಯಾಗುತ್ತದಾ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದ ಸಿದ್ದರಾಮಯ್ಯನವರು, ಅಲ್ಲಿದ್ದ ವೇಳೆ ಶಾಸಕರ ಸಭೆ ನಡೆಸುವ ಮೂಲಕ ಹಾಗೂ ಸರ್ಕಾರದ ಆಯುಷ್ಯ ಕುರಿತು ಆಪ್ತರ ಮುಂದೆ ಮಾತನಾಡುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಆತಂಕ ತಂದೊಡ್ಡಿದ್ದರು.

ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಸಿದ್ದರಾಮಯ್ಯನವರು ಬೆಂಗಳೂರಿಗೆ ಬಂದ ನಂತರ ಅವರೊಂದಿಗೆ ಮಾತುಕತೆ ನಡೆಸಿದ್ದ ಕಾಂಗ್ರೆಸ್ ನಾಯಕರು, ಸಮ್ಮಿಶ್ರ ಸರ್ಕಾರದ ವಿರುದ್ಧದ ಅವರ ಅಸಮಾಧಾನವನ್ನು ಶಮನಗೊಳಿಸಿದ್ದರು.

ಇದೀಗ ಕಾಂಗ್ರೆಸ್ ಶಾಸಕರುಗಳಿಗೆ ಸಿದ್ದರಾಮಯ್ಯನವರು ಔತಣಕೂಟ ಏರ್ಪಡಿಸಿದ್ದು, ಬಜೆಟ್ ಸಂದರ್ಭದಲ್ಲಿ ಶಾಸಕರು ಯಾವ ರೀತಿ ಸರ್ಕಾರದ ಬೆಂಬಲಕ್ಕೆ ನಿಲ್ಲಬೇಕೆಂಬ ಕುರಿತು ಸೂಚನೆ ನೀಡುವ ಸಾಧ್ಯತೆಗಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...