alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲಾ ಮಕ್ಕಳಿಗೆ ಇನ್ಮುಂದೆ ಸುವಾಸಿತ ಹಾಲು

ಬೆಂಗಳೂರು: ರಾಜ್ಯ ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ನೀಡುತ್ತಿದೆ. ಇನ್ನು ಮುಂದೆ ಚಾಕೊಲೇಟ್ ಫ್ಲೇವರ್, ಏಲಕ್ಕಿಯೊಂದಿಗೆ ಗುಲಾಬಿ ಫ್ಲೇವರ್ ಹಾಲನ್ನು ನೀಡಲು ಯೋಜಿಸಲಾಗಿದೆ.

ಪ್ರಾಯೋಗಿಕವಾಗಿ ಮೈಸೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಕ್ಕಳಿಗೆ ಸುವಾಸಿತ ಹಾಲು ನೀಡಲಾಗ್ತಿದೆ. ವಿದ್ಯಾರ್ಥಿಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ಷೀರಭಾಗ್ಯ ಯೋಜನೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ಸುವಾಸಿತ ಹಾಲು ನೀಡುವ ಮೂಲಕ ವಿದ್ಯಾರ್ಥಿಗಳ ಮನ ಗೆಲ್ಲಲು ಪ್ಲಾನ್ ಮಾಡಿದ್ದಾರೆ.

ಬಜೆಟ್ ನಲ್ಲಿ ಸಿ.ಎಂ. ಸಿದ್ಧರಾಮಯ್ಯ ಸುವಾಸಿತ ಹಾಲು ನೀಡುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಇನ್ನು ಚಾಕೊಲೇಟ್ ಫ್ಲೇವರ್, ಏಲಕ್ಕಿಯೊಂದಿಗೆ ಗುಲಾಬಿ ಫ್ಲೇವರ್ ಹಾಲು ಮಕ್ಕಳಿಗೆ ಸಿಗಲಿದೆ. ರಾಜ್ಯದ ಸುಮಾರು 1.5 ಕೋಟಿ ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...