alex Certify
ಕನ್ನಡ ದುನಿಯಾ       Mobile App
       

Kannada Duniya

ಪರಿಷತ್ ಸಭಾಪತಿ ಸ್ಥಾನಕ್ಕಾಗಿ ‘ದೋಸ್ತಿ’ಗಳ ನಡುವೆ ಹಗ್ಗ ಜಗ್ಗಾಟ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದಲ್ಲಿ ಹಗ್ಗಜಗ್ಗಾಟ ನಡೆದಿದ್ದು, ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನೇ ಮುಂದುವರೆಸಲು ಜೆಡಿಎಸ್ ಬಯಸಿದ್ದರೆ, ವಿಧಾನಪರಿಷತ್ ನಲ್ಲಿ ತಮ್ಮ ಪಕ್ಷ ಹೆಚ್ಚು ಸ್ಥಾನ ಹೊಂದಿರುವ ಕಾರಣ ಆ ಸ್ಥಾನವನ್ನು ತಮಗೆ ಬಿಟ್ಟುಕೊಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ.

ಸಮನ್ವಯ ಸಮಿತಿ ಸದಸ್ಯರಾಗಿರುವ ಜೆಡಿಎಸ್ ನಾಯಕ ಡ್ಯಾನಿಶ್ ಆಲಿಯವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನವೊಲಿಸಲು ಮುಂದಾಗಿದ್ದರೂ ಇದಕ್ಕೆ ಒಪ್ಪಿಕೊಂಡಿಲ್ಲವೆನ್ನಲಾಗಿದೆ.

ನಿಮ್ಮ ಸ್ನೇಹಿತರಾದ ಬಸವರಾಜ ಹೊರಟ್ಟಿ ವಿಧಾನಪರಿಷತ್ ಸಭಾಪತಿಯಾಗಲು ಅವಕಾಶ ಮಾಡಿಕೊಡಿ ಎಂದು ಡ್ಯಾನಿಷ್ ಆಲಿಯವರು ಕೇಳಿದ ವೇಳೆ ಇದಕ್ಕೆ ಖಡಕ್ಕಾಗಿ ಉತ್ತರಿಸಿರುವ ಸಿದ್ದರಾಮಯ್ಯನವರು ನಮ್ಮ ಸ್ನೇಹಿತ ಹೊರಟ್ಟಿಯವರಿಗೆ ಸಚಿವ ಸ್ಥಾನ ನೀಡಿ ಎಂದು ತಿರುಗೇಟು ನೀಡಿದ್ದಾರೆನ್ನಲಾಗಿದೆ.

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕಾಗಿ ದೋಸ್ತಿಗಳ ನಡುವೆ ಈಗ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇಂದು ಸಂಜೆಯೊಳಗೆ ಈ ಕುರಿತು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...