alex Certify
ಕನ್ನಡ ದುನಿಯಾ       Mobile App
       

Kannada Duniya

ನಿಷೇಧದ ನಡುವೆಯೂ ಸದನದಲ್ಲಿ ಮೊಬೈಲ್ ವೀಕ್ಷಿಸಿದ ಯತೀಂದ್ರ

ವಿಧಾನಸಭೆಯಲ್ಲಿ ಕೆಲ ಶಾಸಕರುಗಳು ನೀಲಿ ಚಿತ್ರ ವೀಕ್ಷಿಸಿದ ಪ್ರಕರಣದ ಬಳಿಕ ಸದನದೊಳಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಗಳನ್ನು ಮೊಗಸಾಲೆಯಲ್ಲಿಡಲು ವ್ಯವಸ್ಥೆ ಮಾಡಲಾಗಿದೆ. ಹೀಗಿದ್ದರೂ ಹಲವು ಶಾಸಕರು ಮೊಬೈಲ್ ತೆಗೆದುಕೊಂಡು ಹೋದ ಘಟನೆ ನಡೆದಿದೆ.

ಮಂಗಳವಾರದಂದು ಸದನದಲ್ಲಿ ಹಲವು ಶಾಸಕರು ಮೊಬೈಲ್ ಬಳಕೆಯಲ್ಲಿ ತೊಡಗಿದ್ದ ದೃಶ್ಯಗಳು ಮಾಧ್ಯಮದವರ ಕ್ಯಾಮರಾದಲ್ಲಿ ಸೆರೆಯಾಗಿವೆ.

ವರುಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರಾ ಫೇಸ್ಬುಕ್ ವೀಕ್ಷಣೆಯಲ್ಲಿ ತೊಡಗಿದ್ದರೆ, ಶಾಸಕ ಬಿ.ಸಿ. ಪಾಟೀಲ್ ಸೇರಿದಂತೆ ಕೆಲ ಶಾಸಕರುಗಳು ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದು ಕಂಡುಬಂತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...